ಮಡಿಕೇರಿ, ನ.25: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 2021-22 ನೇ ಸಾಲಿಗೆ ಖಾಲಿ ಇರುವ 9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2020-21 ನೇ ಸಾಲಿನಲ್ಲಿ ಯಾವುದೇ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 8 ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯದ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ. 2021 ರ ಫೆಬ್ರವರಿ, 13 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.