ಸೋಮವಾರಪೇಟೆ, ನ. 25: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಯ ವತಿಯಿಂದ ಮಕ್ಕಳ ಗ್ರಾಮಸಭೆ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರ, ಕಾರ್ಡ್ ಸಂಸ್ಥೆಯ ಆಶ್ರಯದಲ್ಲಿ ಮಕ್ಕಳ ಹಕ್ಕು-ಕಾಯ್ದೆಗಳ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಿತು.

ಗೌಡಳ್ಳಿಯ ದುರ್ಗಾಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಗೌಡಳ್ಳಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಗ್ರಾಮಸಭೆಯಲ್ಲಿ ಪಾಲ್ಗೊಂಡು ತಮ್ಮ ಶಾಲೆಯ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು.

ಶಾಲೆಯಲ್ಲಿ ತಡೆಗೋಡೆ, ಶಾಲೆಯ ಆವರಣ, ಆಟದ ಮೈದಾನ ಸ್ವಚ್ಛತೆ, ಶಾಲೆಯಲ್ಲಿ ಬಾಲಕರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರು ವದರಿಂದ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಿಕೊಡುವುದು. ಆಟದ ಸೋಮವಾರಪೇಟೆ, ನ. 25: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಯ ವತಿಯಿಂದ ಮಕ್ಕಳ ಗ್ರಾಮಸಭೆ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರ, ಕಾರ್ಡ್ ಸಂಸ್ಥೆಯ ಆಶ್ರಯದಲ್ಲಿ ಮಕ್ಕಳ ಹಕ್ಕು-ಕಾಯ್ದೆಗಳ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಿತು.

ಗೌಡಳ್ಳಿಯ ದುರ್ಗಾಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಗೌಡಳ್ಳಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಗ್ರಾಮಸಭೆಯಲ್ಲಿ ಪಾಲ್ಗೊಂಡು ತಮ್ಮ ಶಾಲೆಯ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು.

ಶಾಲೆಯಲ್ಲಿ ತಡೆಗೋಡೆ, ಶಾಲೆಯ ಆವರಣ, ಆಟದ ಮೈದಾನ ಸ್ವಚ್ಛತೆ, ಶಾಲೆಯಲ್ಲಿ ಬಾಲಕರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರು ವದರಿಂದ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಿಕೊಡುವುದು. ಆಟದ ಕುಮಾರ್, ಬಾಲ್ಯ ವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾಯಿದೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದರು.

ಮಕ್ಕಳ ಸಮಸ್ಯೆ ತಡೆಗಟ್ಟಲು ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ಗ್ರಾ.ಪಂ., ಅಂಗನವಾಡಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರಿಗೂ ಜವಾಬ್ದಾರಿ ಇದೆ. ಗೌಡಳ್ಳಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡು ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಇಂದೂಧರ್ ಮಾತನಾಡಿ, ಬಾಲ್ಯ ವಿವಾಹದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರೊಂದಿಗೆ ತಾಯಿ ಮತ್ತು ಶಿಶು ಮರಣ ಸಂಭವಿಸುತ್ತದೆ ಎಂದು ಮಾಹಿತಿ ನೀಡಿದರು.

ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ ಕಾರ್ಯಕರ್ತರಾದ ಬಿ.ಕೆ. ಕುಮಾರಿ, ಎ.ಎಸ್. ಯೋಗೇಶ್, ಪ್ರವೀಣ್ ಕುಮಾರ್, ಮಹಿಳಾ ಪೊಲೀಸ್ ಸಿಬ್ಬಂದಿ ಪೂರ್ಣಿಮಾ, ಅಂಗನವಾಡಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು, ವಿವಿಧ ಶಾಲಾ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.