ಮಡಿಕೇರಿ, ನ.25: ಪ್ರಸಕ್ತ(2020-21) ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಅಡಿಯಲ್ಲಿ ರಾಜ್ಯದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟÀಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಗರಡಿ ಮನೆಗಳಿದ್ದು, ಅವುಗಳನ್ನು ದುರಸ್ತಿ ಮತ್ತು ನವೀಕರಣ ಮಾಡಲು ಹಾಗೂ ಗ್ರಾಮೀಣ ಮಟ್ಟದಲ್ಲಿ ಈ ಕ್ರೀಡೆಯ ಬಗ್ಗೆ ಅರಿವು ಉಂಟು ಮಾಡಲು ಇಲಾಖೆಯಿಂದ ಸಹಾಯಧನ ನೀಡುವ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಫಲಾನುಭವಿಗಳು ಡಿಸೆಂಬರ್, 10 ರೊಳಗೆ ಅರ್ಜಿ ಹಾಗೂ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.