ಮಡಿಕೇರಿ, ನ.27: ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಾ. 29 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯಲ್ಲಿ ನೂತನ ತಾಲೂಕು ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 11.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ತಿಳಿಸಿದ್ದಾರೆ.