ಸೋಮವಾರಪೇಟೆ, ನ. 27: ಕಾರು ಅಪಘಾತದಲ್ಲಿ ಐಗೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಬೋಪಯ್ಯ ತೀವ್ರ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಕೇರಿ ಗ್ರಾಮ ನಿವಾಸಿಯಾದ ಬೋಪಯ್ಯ ಅವರು ಗುರುವಾರ ತನ್ನ ಬ್ರೀಝಾ ಕಾರಿನಲ್ಲಿ ತಾಕೇರಿ ರಸ್ತೆಯ ಇಳಿಜಾರು ಜಾಗದಲ್ಲಿ ಸಂಚರಿಸುತ್ತಿದ್ದ ಸಂದರ್ಭ ದುದ್ದುಗಲ್ಲು ಸೇತುವೆ ಬಳಿ ಕಾರು ಅಪಘಾತಕ್ಕೀಡಾಗಿದೆ.
ಪರಿಣಾಮ ಕಾರು ಚಾಲಿಸುತ್ತಿದ್ದ ಬೋಪಯ್ಯ ಅವರ ಬೆನ್ನು ಹಾಗೂ ಸೊಂಟದ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.