ಕೂಡಿಗೆ, ನ. 26: ಕೂಡ್ಲೂರು ಕೈಗಾರಿಕಾ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಶಿವಶಂಕರ್ ತಂಡ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದ ಹತ್ತು ಮಂದಿಯಲ್ಲಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಎಂಟು ಮಂದಿ ತಪ್ಪಿಸಿಕೊಂಡಿದ್ದಾರೆ. ಪಣಕ್ಕಿಟ್ಟಿದ್ದ ರೂ. 1470 ಹಣ, ಮೂರು ಬೈಕ್ ಮತ್ತು ಒಂದು ಆಟೋವನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಕುಶಾಲನಗರ ಗ್ರಾಮಾಂತರ ಪೆÇಲೀಸ್ ಸಹಾಯಕ ಠಾಣಾಧಿಕಾರಿ ರವಿ, ಸಿಬ್ಬಂದಿ ಶ್ರೀನಿವಾಸ ಇದ್ದರು.