ಸೋಮವಾರಪೇಟೆ, ನ. 27: ಹಿರಿಕರ ಶ್ರೀ ಮಲ್ಲೇಶ್ವರ ದೇವಾಲಯ ಸಮಿತಿ ವತಿಯಿಂದ ಗ್ರಾಮದಲ್ಲಿ ನಿರ್ಮಾಣವಾಗಿರುವ ಮಲ್ಲೇಶ್ವರ ಸಮುದಾಯ ಭವನದ ಉದ್ಘಾಟನಾ ಸಮಾರಂಭ ತಾ. 29 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಹೆಚ್.ಪಿ. ಸುರೇಶ್ ತಿಳಿಸಿದ್ದಾರೆ.
ಬೆಂಗಳೂರು ಉದ್ಯಮಿ ಮಧು ಕೂಗೂರು ಭವನ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜೆ. ದೀಪಕ್, ತಾಲೂಕು ಪಂಚಾಯಿತಿ ಸದಸ್ಯೆ ಕುಸುಮಾ ಅಶ್ವಥ್, ಸೇವಾರತ್ನ ಪ್ರಶಸ್ತಿ ಪುರಸ್ಕøತ ಹಾಗು ಉದ್ಯಮಿ ಹರಪಳ್ಳಿ ರವೀಂದ್ರ, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಎಸ್.ಬಿ. ಭರತ್ಕುಮಾರ್, ಬೆಂಗಳೂರು ಉದ್ಯಮಿ ಪ್ರತಾಪ್ಗೌಡ ಬಾಚಿಹಳ್ಳಿ, ದಾನಿಗಳಾದ ಪಿರಿಯಾಪಟ್ಟಣದ ವೆಂಕಟೇಶ್ ಕೃಷ್ಣೇಗೌಡ, ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಗ್ರಾಮದ ಹಿರಿಯರನ್ನು ಸನ್ಮಾನಿಸಲಾಗುತ್ತದೆ ಎಂದು ಸುರೇಶ್ ತಿಳಿಸಿದ್ದಾರೆ.