ಗೋಣಿಕೊಪ್ಪ ವರದಿ, ನ. 27: ಬಿಜೆಪಿ ವತಿಯಿಂದ ತಾ. 29 ರಂದು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಭಾರತೀಯ ಜನತಾ ಪಕ್ಷ ಗ್ರಾಮ ಸ್ವರಾಜ್ ಸಮಾವೇಶ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅತಿಥಿಗಳಾಗಿ ಕಂದಾಯ ಸಚಿವ ಆರ್. ಅಶೋಕ್, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್, ಪೌರಾಡಳಿತ ಸಚಿವ ನಾರಾಯಣಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ, ಲೋಕಸಭಾ ಸದಸ್ಯ ಶ್ರೀನಿವಾಸ್ ಪ್ರಸಾದ್, ರಾಜ್ಯ ಭಾ.ಜ.ಪಾ. ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ ಎ. ರವಿಕುಮಾರ್, ಎಸ್.ಸಿ. ಮೋರ್ಚಾದ ಅಧ್ಯಕ್ಷ ಚಾಲ್ವಾಡಿ ನಾರಾಯಣಸ್ವಾಮಿ, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಭಾಗವಹಿಸಲಿದ್ದಾರೆ. ಪಕ್ಷದ ಜಿಲ್ಲಾ ಹಾಗೂ ತಾಲೂಕಿನ ಸಮಿತಿ ಸದಸ್ಯರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು, ವಿವಿಧ ಮೋರ್ಚಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ತಾಲೂಕು ಮಟ್ಟದ ಸರ್ವ ಚುನಾಯಿತ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಮಾಚಿಮಂಡ ಸುವಿನ್ ಗಣಪತಿ ಮತ್ತು ತಾಲೂಕು ವಕ್ತಾರ ಕುಟ್ಟಂಡ ಅಜಿತ್ ಕರುಂಬಯ್ಯ ತಿಳಿಸಿದ್ದಾರೆ.