ವೀರಾಜಪೇಟೆ, ನ. 26: ರಾಜ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ ಪಟ್ಟಣ ಪಂಚಾಯಿತಿಗಳ ಸರಕಾರದ ಮೀಸಲಾತಿಯ ತಡೆಯಾಜ್ಞೆ ಯನ್ನು ತೆರವುಗೊಳಿಸಿ ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳು ಅಧಿಕಾರವನ್ನು ಮುಂದುವರೆಸ ಬಹುದೆಂದು ನೀಡಿದ ಆದೇಶದ ಹಿನ್ನೆಲೆ ವೀರಾಜಪೇಟೆ ಪಟ್ಟಣ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷೆ ಟಿ.ಆರ್. ಸುಶ್ಮಿತಾ ಹಾಗೂ ಉಪಾಧ್ಯಕ್ಷ ಕೆ.ಬಿ. ಹರ್ಷವರ್ಧನ್ ಕಚೇರಿಗೆ ಆಗಮಿಸಿ ಕಾರ್ಯಾರಂಭ ಮಾಡಿದರು.

ಅಧ್ಯಕ್ಷರಾಗಿ ಆಯ್ಕೆಗೊಂಡಂದಿನಿಂದ ಕಚೇರಿಯ ಕಡತಗಳನ್ನು ಪರಿಶೀಲಿಸಿದ ಸುಶ್ಮಿತಾ ಅವರು ಡಿಸೆಂಬರ್ ಮೊದಲ ವಾರದಲ್ಲಿ ಪಟ್ಟಣ ಪಂಚಾಯಿತಿಯ ಪ್ರಥಮ ಸಭೆಯನ್ನು ಕರೆಯುವುದಾಗಿ ತಿಳಿಸಿದರು.

ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ದಿನವೇ ಇಬ್ಬರು ಆಡಳಿತಾಧಿಕಾರಿಯಿಂದ ಅಧಿಕಾರ ವಹಿಸಿಕೊಂಡಿದ್ದರು.