ಮಡಿಕೇರಿ, ನ. 27: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದಿಂz ಕನ್ನಡ ರಾಜ್ಯೋತ್ಸವ ಮತ್ತು ದಿ. ಅಬ್ದುಲ್ ಹಫೀಜ್ ಸಾಗರ್ ಜ್ಞಾಪಕಾರ್ಥ ಭಾವಗೀತೆ ಕಾರ್ಯಕ್ರಮವು ತಾ. 29 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ 10 ಗಂಟೆಗೆ ಕನ್ನಡ ದ್ವಜಾರೋಹಣ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ ನೆರವೇರಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕಿ ಪ್ರತಿಮ ಹರೀಶ್ ರೈ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನು ಶೆಣೈ ಆಗಮಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಟಿ.ಪಿ. ರಮೇಶ್ ದತ್ತಿ ಪ್ರಶಸ್ತಿ ಪ್ರದಾನ, ಸನ್ಮಾನ ಮತ್ತು ಬಹುಮಾನ ವಿತರಣೆ ನಡೆಯಲಿದೆ. 2019-20ರ ಸಾಲಿನಲ್ಲಿ ಜಿಲ್ಲೆಯಲ್ಲಿ ನಡೆದ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದು 603 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸೋಮವಾಪೇಟೆ ತಾಲೂಕಿನ ಐಗೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಆರ್. ಹರ್ಷಿತಾರವರಿಗೆ ದತ್ತಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.

ಜಿಲ್ಲೆಯ 9 ಮಂದಿ ಸಾಧಕರುಗಳಿಗೆ ಸನ್ಮಾನ ಮಾಡಲಾಗುವುದು. ಡಾಕ್ಟರೇಟ್ ಪದವಿ ಪಡೆದ ಡಾ. ಮುಲ್ಲೆಂಗಡ ರೇವತಿ ಪೂವಯ್ಯ, ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಪಿ. ರೇವತಿ ರಮೇಶ್, ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ, ರಾಜ್ಯ ಗುರುಕುಲ ಕಲಾ ಕುಸುಮ ಪ್ರಶಸ್ತಿ ಪುರಸ್ಕøತರಾದ ಟಿ.ಸಿ. ಗೀತಾ ನಾಯ್ಡು, ಹಾಕಿ ಕ್ರೀಡೆಯಲ್ಲಿ ಕರ್ನಾಟಕ ರಾಜ್ಯ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕøತರಾದ ಸಿ.ಎಂ. ಕರುಂಬಯ್ಯ, ಬಾಲ್ ಬ್ಯಾಡ್‍ಮಿಂಟೆನ್‍ನಲ್ಲಿ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕøತರಾದ ಲಾವಣ್ಯ ಧನಪಾಲ್ ಬಿ. ಮತ್ತು ಪಲ್ಲವಿ ಎಸ್.ಕೆ., ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಜೆ.ಕೆ. ರಾಮು, ಎಸ್.ಎಸ್.ಎಲ್.ಸಿ ಪರೀಕ್ಷ್ಷೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಪಡೆದ ಎಂ.ಎನ್. ನಿಹಾನ್ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಸನ್ಮಾನಿಸಲಿದ್ದಾರೆ.

ಹಿರಿಯ ಪತ್ರಕರ್ತ, ಸಂಪಾದಕ ಹೆಚ್.ಟಿ. ಅನಿಲ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫ್ರೆಡ್ ಕ್ರಾಸ್ತಾ ತಿಳಿಸಿದ್ದಾರೆ.