ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ 71ನೇ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.ಸೋಮವಾರಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣೆಯೊಂದಿಗೆ ಸೋಮವಾರಪೇಟೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಶಿಲ್ಪಿಗೆ ಜೈಕಾರ ಮೊಳಗಿಸಲಾಯಿತು. ದೇಶದಲ್ಲಿ ಸಂವಿಧಾನ ಉಳಿಯಬೇಕು, ಜಾತೀಯತೆ ತೊಲಗಬೇಕು. ಸಮಾನತೆ ಬೆಳೆಯಬೇಕೆಂದು ಒಕ್ಕೂಟದ ಅಧ್ಯಕ್ಷ ಟಿ.ಈ. ಸುರೇಶ್ ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ಕುಮಾರ್ ಮಾತನಾಡಿ, ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಕೀರ್ತಿ ಅಂಬೇಡ್ಕರ್ಗೆ ಸಲ್ಲುತ್ತದೆ. ಇಂತಹ ಸಂವಿಧಾನವನ್ನು ಉಳಿಸುವ ಕೆಲಸ ಸರ್ಕಾರಗಳಿಂದ ಆಗಬೇಕು ಎಂದರು.
ಈ ಸಂದರ್ಭ ದಲಿತ ಸಂಘಟನೆಗಳ ಒಕ್ಕೂಟದ ತಾಲೂಕು ಪ್ರಧಾನ ಕಾರ್ಯದರ್ಶಿ ಜೆ.ಎಲ್. ಜನಾರ್ಧನ್, ಖಜಾಂಚಿ ಎಸ್.ಎ. ಪ್ರತಾಪ್, ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಎ.ಆರ್. ಚಂದ್ರು, ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಪದಾಧಿಕಾರಿಗಳಾದ ಗಿರೀಶ್, ಇಂದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಮಡಿಕೇರಿ ಕಾಂಗ್ರೆಸ್ ಕಚೇರಿ: ಭಾರತದ ಸಂವಿಧಾನ ಅಂಗೀಕಾರ ದಿನವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೆÉೀರಿಯಲ್ಲಿ ಆಚರಿಸಲಾಯಿತು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂವಿಧಾನದ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು
ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನೀರಾ ಮೈನಾ ನಮ್ಮ ಸಂವಿಧಾನವು ಕೇವಲ ಒಂದು ಗ್ರಂಥ ಅಥವಾ ಪುಸ್ತಕವಲ್ಲಾ, ಭಾರತದ ಪ್ರಜೆಗಳ ಬದುಕಿನ ಅವಿಭಾಜ್ಯ ಅಂಗ ಎಂದು ವ್ಯಾಖ್ಯಾನಿಸಿದರು.
ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಜ್ಯಸಭಾ ಸದಸ್ಯ ಅಹಮದ್ ಪಟೇಲ್ ನಿಧನಕ್ಕೆ ಸಭೆಯಲ್ಲಿ ಸಂತಾಪ ಸಲ್ಲಿಸಲಾಯಿತು. ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕಲೀಲ್ ಬಾಷಾ, ನಗರಾಧ್ಯಕ್ಷ ಗಿಲ್ಬರ್ಟ್ ಲೋಬೋ, ವೃತ್ತಿಪರ ಘಟಕದ ಜಿಲ್ಲಾಧ್ಯಕ್ಷರಾದ ಅಂಬೇಕಲ್ ನವೀನ್ ಕುಶಾಲಪ್ಪ ನಗರಸಭೆ ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಕೆ.ಎಂ. ವೆಂಕಟೇಶ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುರೈ, ವಸಂತ್ ಭಟ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಬ್ಲಾಕ್ ಉಪಾಧ್ಯಕ್ಷೆ ಸ್ವರ್ಣಲತಾ, ಯುವ ಕಾಂಗ್ರೆಸ್ ಅಧ್ಯಕ್ಷ ನಾಪಂಡ ರವಿ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಂಡೀರಾ ಸದಾ ಮುದ್ದಪ್ಪ, ಹಿಂದುಳಿದ ಘಟಕಾಧ್ಯಕ್ಷ ಜಿ.ಸಿ. ಜಗದೀಶ್, ಎಸ್ಸಿ ಘಟಕಾಧ್ಯಕ್ಷ ಮುದ್ದುರಾಜ್, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿಗೌಡ ಮತ್ತಿತರರು ಪಾಲ್ಗೊಂಡಿದ್ದರು.ಹೆಬ್ಬಾಲೆ: ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾ ವತಿಯಿಂದ ತಾಲೂಕಿನ ಹೆಬ್ಬಾಲೆಯ ಕನಕ ಬ್ಲಾಕ್ನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್ ಶಾಂತಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ದೇಶದ ಸರ್ವಾಂಗೀಣ ಜನತೆಗೆ ಸಮಾನತೆ ಕಲ್ಪಿಸಲು ಅವಿರತ ಹೋರಾಟ ನಡೆಸಿದರು. ಆಳವಾದ ಅಧ್ಯಯನ, ಮುಂದಾಲೋಚನೆಯ ಫಲವಾಗಿ ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ ಎಂದು ಸ್ಮರಿಸಿದರು.
ಕಾರ್ಯಕ್ರಮವನ್ನು ಎಸ್ಸಿ ಮೋರ್ಚಾದ ಉಪಾಧ್ಯಕ್ಷ ಶಿವರಾಜ್ ಉದ್ಘಾಟಿಸಿದರು. ಈ ಸಂದರ್ಭ ತಾ.ಪಂ. ಮಾಜೀ ಅಧ್ಯಕ್ಷೆ ಜ್ಯೋತಿ ಶಿವಣ್ಣ, ಮೋರ್ಚಾದ ಕಾರ್ಯದರ್ಶಿಗಳಾದ ಕುಮಾರಸ್ವಾಮಿ, ಪದ್ಮಾವತಿ ಮಹದೇವ್, ರಾಜ್ಯ ಸಮಿತಿ ಮಾಜೀ ಸದಸ್ಯ ವರದರಾಜ್ದಾಸ್, ಪ್ರಮುಖರಾದ ಭೀಮಯ್ಯ, ನಾರಾಯಣ, ರವಿ, ಅವಿನಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿ ಕಚೇರಿ: ಸಂವಿಧಾನ ದಿನ ಪ್ರಯುಕ್ತ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಭಾರತ ದೇಶದ ಪ್ರಜೆಗಳಾದ ನಾವು ರಾಷ್ಟ್ರವನ್ನು ಸಾರ್ರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಬದ್ಧರಾಗಿರಬೇಕು ಎಂದರು.
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನ ಸ್ವತಂತ್ರ, ಸ್ಥಾನ ಮಾನ ಹಾಗೂ ಸಮಾನತೆ ದೊರೆಯುವಂತೆ ಮಾಡಲು ಶ್ರಮಿಸಬೇಕು. ವ್ಯಕ್ತಿ ಗೌರವ, ರಾಷ್ಟ್ರದ ಏಕತೆ, ಹಾಗೂ ಅಖಂಡತೆಯನ್ನು ಕಾಪಾಡುವುದು. ಭ್ರಾತೃತ್ವ ಭಾವನೆ ವೃದ್ಧಿಗೊಳಿಸಲು ಸಂಕಲ್ಪ ಮಾಡುವಂತಾಗಬೇಕು ಎಂದು ಬೋಧಿಸಿದರು.
1949ರ ನವೆಂಬರ್, 26 ರಂದು ಸಂವಿಧಾನವನ್ನು ಅರ್ಪಿಸಿಕೊಂಡಿದ್ದೇವೆ ಎಂದು ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಬೋಧಿಸಿದರು. ನಾನಾ ಇಲಾಖೆ ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.