ಕೂಡಿಗೆ, ನ. 27: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ 2012ರಲ್ಲಿ ಶ್ರೀಗಂಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಸಮೀಪದ ನಂದಿಗುಡ್ಡ ಕಾವಲು ಗ್ರಾಮದ ಬಸವರಾಜು ಎಂಬವನನ್ನು ಕುಶಾಲನಗರದ ಕೊಪ್ಪ ಗೇಟ್ ಬಳಿ ಬಂಧಿಸಲಾಗಿದೆ. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. 2012ರಲ್ಲಿ ಶ್ರೀಗಂಧ ಮರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ವಲಯ ಅರಣ್ಯಾಧಿಕಾರಿ ವಿ.ಆರ್. ಕಾರ್ಯಪ್ಪ ಅವರು ನೀಡಿದ ದೂರಿನನ್ವಯ ಮೊಕದ್ದಮೆ ದಾಖಲಾಗಿತ್ತು. ಆದರೆ ಆರೋಪಿಗಳು ತಲೆಮರೆಸಿಕೊಂಡಿದ್ದರು. ಪ್ರಕರಣದ ಇಬ್ಬರು ಆರೋಪಿಗಳು ಸಾವನ್ನಪ್ಪಿರುವರಾಗಿ ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಶಿವಶಂಕರ್, ಸಹಾಯಕ ಪೆÇಲೀಸ್ ಅಧಿಕಾರಿ ರವಿ ಮತ್ತು ಪೆÇಲೀಸ್ ಪೇದೆ ಶ್ರೀನಿವಾಸ್ ಇದ್ದರು.