ಚೆಟ್ಟಳ್ಳಿ, ನ. 28: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸದ್ಯದಲ್ಲೇ ಎಂಬಿಬಿಎಸ್ ಪೂರ್ಣಗೊಳಿಸಿದ ವೈದ್ಯರನ್ನು ಹಾಗೂ ನುರಿತ ನರ್ಸ್‍ಗಳನ್ನು ನೇಮಕ ಮಾಡಬೇಕೆಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಗ್ರಾಮಸಭೆಯಲ್ಲಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒಕ್ಕೊರಲಿನಿಂದ ಒತ್ತಾಯ ಮಾಡಿದರು.

ಚೆಟ್ಟಳ್ಳಿ ಗ್ರಾಮ ಪಂಚಾಯತಿಯ 2020-21ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಎಸ್.ಎನ್. ನಾಗರಾಜು ಸಹಾಯಕ ಅಭಿಯಂತರು ಹಾರಂಗಿ ಜಲಾಶಯ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು.

ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ದೊರಕದೆ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸ ಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಗ್ರಾಮ ಸಭೆಯಲ್ಲಿ ನಡೆಯಿತು.

ವೈದ್ಯರ ವಿರುದ್ಧ ಹಲವಾರು ದೂರುಗಳು ಸಾರ್ವಜನಿಕರು ನೀಡುತ್ತಿದ್ದಾರೆ, ಆದಷ್ಟು ಬೇಗ ಎಂ.ಬಿ.ಬಿ.ಎಸ್ ಪೂರ್ಣಗೊಳಿಸಿದ ವೈದ್ಯರನ್ನು ನೇಮಕ ಮಾಡಬೇಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ, ತೀರ್ಥಕುಮಾರ್ (ಮೂಡಳ್ಳಿ ರವಿ) ಮೊಹಮ್ಮದ್ ರಫಿ, ರವಿ ಹಾಗೂ ಚೆಟ್ಟಳ್ಳಿ, ನ. 28: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸದ್ಯದಲ್ಲೇ ಎಂಬಿಬಿಎಸ್ ಪೂರ್ಣಗೊಳಿಸಿದ ವೈದ್ಯರನ್ನು ಹಾಗೂ ನುರಿತ ನರ್ಸ್‍ಗಳನ್ನು ನೇಮಕ ಮಾಡಬೇಕೆಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಗ್ರಾಮಸಭೆಯಲ್ಲಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒಕ್ಕೊರಲಿನಿಂದ ಒತ್ತಾಯ ಮಾಡಿದರು.

ಚೆಟ್ಟಳ್ಳಿ ಗ್ರಾಮ ಪಂಚಾಯತಿಯ 2020-21ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಎಸ್.ಎನ್. ನಾಗರಾಜು ಸಹಾಯಕ ಅಭಿಯಂತರು ಹಾರಂಗಿ ಜಲಾಶಯ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು.

ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ದೊರಕದೆ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸ ಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಗ್ರಾಮ ಸಭೆಯಲ್ಲಿ ನಡೆಯಿತು.

ವೈದ್ಯರ ವಿರುದ್ಧ ಹಲವಾರು ದೂರುಗಳು ಸಾರ್ವಜನಿಕರು ನೀಡುತ್ತಿದ್ದಾರೆ, ಆದಷ್ಟು ಬೇಗ ಎಂ.ಬಿ.ಬಿ.ಎಸ್ ಪೂರ್ಣಗೊಳಿಸಿದ ವೈದ್ಯರನ್ನು ನೇಮಕ ಮಾಡಬೇಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ, ತೀರ್ಥಕುಮಾರ್ (ಮೂಡಳ್ಳಿ ರವಿ) ಮೊಹಮ್ಮದ್ ರಫಿ, ರವಿ ಹಾಗೂ ನೀಡಿದರು. ಚೆಟ್ಟಳ್ಳಿ ಸಹಕಾರ ಸಂಘದ ನ್ಯಾಯ ಬೆಲೆ ಅಂಗಡಿಯಲ್ಲಿ ಸರ್ಕಾರದಿಂದ ಬರುವ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಚೆಟ್ಟಳ್ಳಿ ಗ್ರಾಮದ ಅಂಜನ್ ಆಹಾರ ಇಲಾಖೆಯ ಅಧಿಕಾರಿ ಗಳೊಂದಿಗೆ ದೂರಿದರು. ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಣಿ ಉತ್ತಪ್ಪ ಪ್ರತಿಕ್ರಿಯಿಸಿ, ನ್ಯಾಯಬೆಲೆ ಅಂಗಡಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಅಗತ್ಯವಿದ್ದಲ್ಲಿ ತನಿಖೆಗೆ ಸಿದ್ಧವಿದ್ದೇವೆ ಎಂದರು.

ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಯಶೋಧ ಮಾತನಾಡಿ, ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇದುವರೆಗೆ 153 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಎಲ್ಲರೂ ಕೂಡ ಗುಣಮುಖರಾಗಿದ್ದಾರೆ. ಇದುವರೆಗೆ ಮೂರು ಸಾವಿರಕ್ಕೂ ಹೆಚ್ಚು ಆರ್.ಟಿ.ಪಿಸಿ.ಆರ್. ಟೆಸ್ಟ್‍ಗಳನ್ನು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಎಂಬಿಬಿಎಸ್ ವೈದ್ಯರ ನೇಮಕದ ಬಗ್ಗೆ ನಾನು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಹಲವಾರು ಬಾರಿ ಪ್ರಸ್ತಾಪ ಮಾಡಿದ್ದೇನೆ. ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎಂದು ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್ ಹೇಳಿದರು.

ಅನುದಾನ ಕೊರತೆಯ ನಡುವೆಯೂ ತಾವು ರಾಜಕೀಯ ರಹಿತವಾಗಿ ಕೆಲಸ ನಿರ್ವಹಿಸಿದ್ದು, ಕಾಮಗಾರಿಗಳಿಗೆ ಅನುದಾನವನ್ನು ಹಂಚಿಕೆ ಮಾಡಿದ್ದೇನೆ ಎಂದು ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಹೇಳಿದರು. ಚೆಟ್ಟಳ್ಳಿ ಗ್ರಾಮ ಪಂಚಾಯತಿಯ 25 ಕಿಲೋಮೀಟರ್ ಸಂಪೂರ್ಣ ರಸ್ತೆ ಡಾಂಬರೀಕರಣ ಮಾಡಬೇಕಾಗಿ ತಾವು ತಾಲೂಕು ಪಂಚಾಯತಿ ಸಭೆಯಲ್ಲಿ ಪ್ರಸ್ತಾಪ ಮಾಡಿರುವುದಾಗಿ ಹೇಳಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿ, ಇಲಾಖೆಯ ವಿವಿಧ ಯೋಜನೆಗಳು ಬಗ್ಗೆ ಮಾಹಿತಿ ನೀಡಿದರು. ಸಂವಿಧಾನ ಪೀಠಿಕೆಯನ್ನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬೋಧಿಸಿ, ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿ ಸಂವಿಧಾನ ದಿನವನ್ನು ಗ್ರಾಮ ಸಭೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭ ನೋಡಲ್ ಅಧಿಕಾರಿಗಳಾದ ಅಣ್ಣಯ್ಯ, ಶಿಶು ಅಭಿವೃದ್ಧಿ ಅಧಿಕಾರಿ ಸೋಮವಾರ ಪೇಟೆ, ಗ್ರಾ.ಪಂ. ಕಾರ್ಯದರ್ಶಿ ಮಂಜುಳಾ, ಸಿಬ್ಬಂದಿಗಳಾದ ಸಾಹಿರ ಪ್ರಶಾಂತ್, ಚಂದ್ರ, ಕಂದಸ್ವಾಮಿ ಮೈದು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಶಿಕ್ಷಕರು ಹಾಜರಿದ್ದರು. ಸಭೆಯಲ್ಲಿ ಕಂದಾಯ ಅಧಿಕಾರಿಗಳು ಗೈರಾಗಿದ್ದರು.

-ಕೆ.ಎಂ ಇಸ್ಮಾಯಿಲ್ ಕಂಡಕರೆ