ಕೂಡಿಗೆ, ನ. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಜೆ.ಪಿ. ಕುಟುಂಬ ಮಿಲನ ಕಾರ್ಯಕ್ರಮದ ಯೋಜನೆಯ ಅಂಗವಾಗಿ ಬೂತ್ ಸಮಿತಿ ಸಭೆ ಶಾಂತರಾಜ್ ಸಭಾಂಗಣದಲ್ಲಿ ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಟಿ. ಗೀರಿಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸುವ ಬಗ್ಗೆ ಮತ್ತು ಬಿಜೆಪಿ ಕುಟುಂಬ ಸದಸ್ಯರ ಮಿಲನ ಕಾರ್ಯಕ್ರಮದ ಬಗ್ಗೆ ಚರ್ಚೆಗಳು ನಡೆದವು. ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ತಾಲೂಕು ಬಿಜೆಪಿ ವಕ್ತಾರ ಕೆ.ಜಿ. ಮನು ಕುಟುಂಬ ಮಿಲನದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಭಾಸ್ಕರ್ ನಾಯಕ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.