ಗೋಣಿಕೊಪ್ಪಲು, ನ. 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ಅವರು ವಿಚಾರ ವಿನಿಮಯ ನಡೆಸಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಮೀದೇರಿರ ನವೀನ್ ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಕಾರ್ಯದರ್ಶಿ ಬಾಲಕೃಷ್ಣ, ಹಿರಿಯ ಮುಖಂಡರುಗಳಾದ ಪಿ.ಕೆ. ಪೊನ್ನಪ್ಪ, ಕೊರಕುಟ್ಟೀರ ಸರ ಚಂಗಪ್ಪ, ತೀತಿರ ಧರ್ಮಜ, ತಾ.ಪಂ. ಸದಸ್ಯರಾದ ಮೂಕಳೇರ ಆಶಾ, ಕಡೇಮಾಡ ಕುಸುಮಾ ಜೋಯಪ್ಪ, ಕುಲ್ಲಚಂಡ ಪ್ರಮೋದ್ ಗಣಪತಿ, ನಾಮೇರ ಅಂಕಿತ್ ಪೊನ್ನಪ್ಪ, ಜೆ.ಕೆ. ಸೋಮಣ್ಣ, ತೆರೆಸಾ ವಿಕ್ಟರ್ ಮತ್ತಿತ್ತರು ಉಪಸ್ಥಿತರಿದ್ದರು.

-ಹೆಚ್.ಕೆ.ಜಗದೀಶ್