ಮಡಿಕೇರಿ, ನ. 28: ಜಿಲ್ಲೆಯಲ್ಲಿ ತಾ. 28 ರಂದು ಹೊಸದಾಗಿ 6 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 89,339 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,315 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,174 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 72 ಮಂದಿ ಸಾವನ್ನಪ್ಪಿದ್ದು 69 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 11 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 58 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 71 ನಿಯಂತ್ರಿತ ವಲಯಗಳಿವೆ.