ಕೂಡಿಗೆ, ನ. 28: ಸೋಮವಾರಪೇಟೆ-ಕುಶಾಲನಗರ ರಸ್ತೆಯ ಎರಡೂ ಕಡೆಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಈ ಮಾರ್ಗದಲ್ಲಿ ಚಾಲಿಸುವ ವಾಹನ ಸವಾರರು ಮತ್ತು ಪ್ರವಾಸಿಗರು ಬಿಸಾಡಿದ ಪ್ಲಾಸ್ಟಿಕ್‍ಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.
ಅಲ್ಲದೆ ರಸ್ತೆಗೆ ಹೊಂದಿಕೊಂಡಂತಿರುವ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಹುದುಗೂರು ಉಪ ವಲಯ ಅರಣ್ಯ ಅಧಿಕಾರಿ ಮನು, ಅರಣ್ಯ ರಕ್ಷಕರಾದ ರಾಜಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.