ಸಿದ್ದಾಪುರ, ನ. 28: ಹೊಸ್ಕೇರಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ ಗ್ರಾಮಸಭೆ ಅರೆಕಾಡು ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು. ಈ ಸಂದರ್ಭ ಗ್ರಾಮಸ್ಥರು ಗ್ರಾಮದ ವಿವಿಧ ಸಮಸ್ಯೆಗಳನ್ನು ಬಗೆಹರಿಸಿ ಕೊಡುವಂತೆ ಮನವಿ ಮಾಡಿ ಕೊಂಡರು. ಸಭೆಗೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.