ಕೂಡಿಗೆ. ಡಿ. 1: ಕೂಡಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿಯ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ಕೂಡಿಗೆ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕೂಡಿಗೆ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ಹಮೀದ್ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಮತ್ತು ಆಯಾ ವಾರ್ಡ್ನ ಬೂತ್ ಸಮಿತಿಯ ಬಗ್ಗೆ ಚರ್ಚೆಗಳು ನಡೆದವು. ಟಿ.ಪಿ. ಹಮೀದ್ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಹಾಗೂ ಸಿದ್ಧಾಂತಗಳ ಬಗ್ಗೆ ಮನವರಿಕೆ ಮಾಡುವದರ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್, ಕೆ.ಪಿ.ಸಿ.ಸಿ. ಸಂಯೋಜಕ ಪ್ರದೀಪ್ ರೈ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.