ಮಡಿಕೇರಿ, ಡಿ.1: ಜಿಲ್ಲೆಯಲ್ಲಿ ತಾ.1 ರಂದು ಹೊಸದಾಗಿ 10 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 91,557 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,344 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,197 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು 74 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 16 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , 58 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 59 ನಿಯಂತ್ರಿತ ವಲಯಗಳಿವೆ.