ಭಾಗಮಂಡಲ, ಡಿ. 1: ಭಾಗಮಂಡಲ ಗೌಡ ಸಮಾಜದಲ್ಲಿ ಮಡಿಕೇರಿ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅಧ್ಯಕ್ಷತೆಯಲ್ಲಿ ಭಾಗಮಂಡಲ ಗ್ರಾಮ ಪಂಚಾಯಿತಿಗೆ ಒಳಪಟ್ಟ ಸಾರ್ವಜನಿಕರ ಸಭೆಯನ್ನು ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಮಾತನಾಡಿದ ರವಿಕುಶಾಲಪ್ಪ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಶಾಸಕರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಕ್ಕು ಪತ್ರಗಳನ್ನು ವಿತರಿಸಲಾಗುವುದು.

ಪ್ರಸ್ತುತ ಕಂದಾಯ ಮತ್ತು ಅರಣ್ಯ ಇಲಾಖೆಗಳ ಅಕ್ರಮ-ಸಕ್ರಮ ಅರ್ಜಿಗಳಲ್ಲಿ ಕೆಲವೊಂದು ತೊಡಕುಗಳು ಕಂಡುಬಂದಿದ್ದು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಇತ್ಯರ್ಥಪಡಿಸಲಾಗುವುದು ಎಂದರು.

ಸಮಿತಿ ಸದಸ್ಯರಾದ ಸುಬ್ರಮಣ್ಯ ಉಪಾಧ್ಯಾಯ, ಕವಿತಾ ಪ್ರಭಾಕರ್ ಮಿಟ್ಟು ರಂಜಿತ್, ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ, ಪಿ.ಎಂ. ರಾಜೀವ್, ಕುದುಪಜೆ ಪ್ರಕಾಶ್, ಕುಯ್ಯಮುಡಿ ಮನೋಜ್, ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.