ಮಡಿಕೇರಿ, ಡಿ. 1: ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಹಾಗೂ ಅರಣ್ಯ ಸಚಿವರಾದ ಆನಂದ್ ಸಿಂಗ್ ಇವರುಗಳು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ತಾ. 3 ರಂದು ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ಬಿದಿರು ನರ್ಸರಿ, ಬಾಲಕಿಯರ ವಸತಿ ನಿಲಯ, ಬಿದಿರು ಸಂಶೋಧನಾ ಕೇಂದ್ರಗಳ ಉದ್ಘಾಟನೆ ಹಾಗೂ ಬಾಲಕರ ವಸತಿ ನಿಯದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಇವರುಗಳು ಪಾಲ್ಗೊಳ್ಳಲಿದ್ದಾರೆ. ಬಳಿಕ ಬಿದಿರು ಬೆಳೆಗಾರರಿಗೆ ಚೆಕ್ ವಿತರಣೆ ನಂತರ ಮಧ್ಯಾಹ್ನ 2 ಗಂಟೆಗೆ ಮಾನವ-ವನ್ಯಪ್ರಾಣಿ ಸಂಘರ್ಷ ಉಪಶಮನದ ಬಗ್ಗೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ.