ಮಡಿಕೇರಿ, ಡಿ. 1: ರಾಜ್ಯ ಚುನಾವಣಾ ಆಯೋಗವು ಗ್ರಾ.ಪಂ. ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಕೊಡಗು ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಗ್ರಾ.ಪಂ.ಗಳಿಗೆ ಮತ್ತು ಎರಡನೇ ಹಂತದಲ್ಲಿ ವೀರಾಜಪೇಟೆ ತಾಲೂಕಿನ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ತಾ. 7 ರಂದು ಜಿಲ್ಲಾಧಿಕಾರಿ ಅವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ತಾ. 11 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ತಾ. 12 ರಂದು ನಾಮಪತ್ರ ಪರಿಶೀಲಿಸ ಲಾಗುತ್ತದೆ. ತಾ. 14 ರಂದು ಉಮೇದುವಾರಿಕೆಯನ್ನು ಹಿಂತೆಗೆದು ಕೊಳ್ಳಲು ಕೊನೆಯ ದಿನವಾಗಿದೆ. ತಾ. 22 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದೆ. ತಾ. 24 ರಂದು ಮರು ಮತದಾನ ಅಗತ್ಯವಿದ್ದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ತಾ. 30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆಯು ತಾಲೂಕುಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿವರಿಸಿದರು.
ಹಾಗೆಯೇ ಎರಡನೇ ಹಂತದಲ್ಲಿ ಮಡಿಕೇರಿ, ಡಿ. 1: ರಾಜ್ಯ ಚುನಾವಣಾ ಆಯೋಗವು ಗ್ರಾ.ಪಂ. ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಕೊಡಗು ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಗ್ರಾ.ಪಂ.ಗಳಿಗೆ ಮತ್ತು ಎರಡನೇ ಹಂತದಲ್ಲಿ ವೀರಾಜಪೇಟೆ ತಾಲೂಕಿನ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ತಾ. 7 ರಂದು ಜಿಲ್ಲಾಧಿಕಾರಿ ಅವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ತಾ. 11 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ತಾ. 12 ರಂದು ನಾಮಪತ್ರ ಪರಿಶೀಲಿಸ ಲಾಗುತ್ತದೆ. ತಾ. 14 ರಂದು ಉಮೇದುವಾರಿಕೆಯನ್ನು ಹಿಂತೆಗೆದು ಕೊಳ್ಳಲು ಕೊನೆಯ ದಿನವಾಗಿದೆ. ತಾ. 22 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದೆ. ತಾ. 24 ರಂದು ಮರು ಮತದಾನ ಅಗತ್ಯವಿದ್ದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ತಾ. 30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆಯು ತಾಲೂಕುಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿವರಿಸಿದರು.
ಹಾಗೆಯೇ ಎರಡನೇ ಹಂತದಲ್ಲಿ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾ.ಪಂ.ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ. ಗ್ರಾ.ಪಂ. ಚುನಾವಣೆಯು ಪಕ್ಷ ರಹಿತ ಚುನಾವಣೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಗ್ರಾ.ಪಂ. ಚುನಾವಣೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕಿನಿಂದ ಮತಗಟ್ಟೆಗಳು ಹಾಗೂ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 562 ಮತಗಟ್ಟೆಗಳನ್ನು ಗುರುತಿಸ ಲಾಗಿದೆ. 472 ಮೂಲ ಮತಗಟ್ಟೆಗಳು, 90 ಹೆಚ್ಚುವರಿ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 443 ಒಟ್ಟು ಚುನಾವಣಾ ಕ್ಷೇತ್ರಗಳಿದ್ದು, ಇದರಲ್ಲಿ 1202 ಸದಸ್ಯರಿಗೆ ಚುನಾವಣೆ ನಡೆಯಲಿದೆ. ಮಡಿಕೇರಿ ತಾಲೂಕಿನಲ್ಲಿ 295, ವೀರಾಜಪೇಟೆ ತಾಲೂಕಿನಲ್ಲಿ 424, ಸೋಮವಾರಪೇಟೆ ತಾಲೂಕಿ ನಲ್ಲಿ 483 ಸದಸ್ಯರಿಗೆ ಚುನಾವಣೆ ನಡೆಯಲಿದೆ. ಗ್ರಾ.ಪಂ. ಚುನಾವಣೆ ಹಿನ್ನೆಲೆ 110 ಚುನಾವಣಾ ಅಧಿಕಾರಿಗಳು ಮತ್ತು 110 ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜೊತೆಗೆ ತಾಲೂಕುವಾರು ಮತಗಟ್ಟೆ ಅಧಿಕಾರಿಗಳ/ ಸಿಬ್ಬಂದಿಗಳನ್ನು ಶೇ. 10 ರಷ್ಟು ಕಾಯ್ದಿರಿಸಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ 472 ಮತಗಟ್ಟೆಗಳು ಹಾಗೂ 90 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 562 ಮತಗಟ್ಟೆಗಳಿಗೆ ತಲಾ 619 ಪಿಆರ್‍ಒ ಮತ್ತು ಎಪಿಆರ್‍ಒಗಳು ಹಾಗೂ 1238 ಪೋಲಿಂಗ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 472 ಮೂಲ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಟ್ಟು 90 ಹೆಚ್ಚುವರಿ ಮತಗಟ್ಟೆಗಳಿವೆ. ಪ್ರತಿಯೊಂದು ಮತಗಟ್ಟೆಗೂ ಒಬ್ಬ ಅಧ್ಯಕ್ಷಾಧಿಕಾರಿ ಮತ್ತು ಮೂರು ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗುತ್ತದೆ.
ಕೊಡಗು ಜಿಲ್ಲೆಯ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರ ಪೇಟೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಕ್ಷೇತ್ರವಾರು ಮೀಸಲಾತಿಯನ್ನು ನಿಗದಿಪಡಿಸ ಲಾಗಿದ್ದು, ಮೀಸಲಾತಿ ವಿವರವನ್ನು ವೆಬ್‍ಸೈಟ್ ತಿತಿತಿ.ಞoಜಚಿgu. ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ.
ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರವನ್ನು ಬಳಸಿಕೊಳ್ಳ ಲಾಗುವುದು. ಮಾದರಿ ನೀತಿ ಸಂಹಿತೆ ಯನ್ನು ಜಾರಿಗೊಳಿಸಲು ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸ ಲಾಗುವುದು. ತಾಲೂಕು ಕೇಂದ್ರ ಗಳನ್ನು ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಎಣಿಕೆ ಕೇಂದ್ರಗಳನ್ನು ಗುರುತಿಸಲಾಗುವುದು. ಮತಪತ್ರಗಳ ಮುದ್ರಣಕ್ಕಾಗಿ ಸ್ಥಳೀಯ ಮುದ್ರಣಾ ಲಾಯಗಳನ್ನು ಗುರುತಿಸಿ ಕೊಳ್ಳಲಾಗಿದೆ. ಗೋಷ್ಠಿಯಲ್ಲಿ ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂದೂ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶ್ರೀನಿವಾಸ್, ಡಿವೈಎಸ್‍ಪಿ ದಿನೇಶ್ ಕುಮಾರ್ ಇತರರು ಇದ್ದರು.