ಮಡಿಕೇರಿ, ಡಿ. 2: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ವೀರಾಜಪೇಟೆಯ ಬಡಕಡ ರಜಿತ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳಿಧರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕವಿ, ಸಾಹಿತಿ, ಪತ್ರಕರ್ತರಾಗಿರುವ ರಜಿತಾ ಕಾರ್ಯಪ್ಪ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕರಾಗಿ, ವೀರಾಜಪೇಟೆ ಜಾನಪದ ಪರಿಷತ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಹಲವಾರು ಸಾಹಿತ್ಯ ಹಾಗೂ ಸಾಂಸ್ಕøತಿಕ ಸಂಸ್ಥೆಗಳ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಇವರು ಕನ್ನಡದಲ್ಲಿ 8 ಕೃತಿಗಳನ್ನು ಹೊರತಂದಿದ್ದಾರೆ.