ಮಡಿಕೇರಿ, ಡಿ. 2: ಜಿಲ್ಲೆಯಲ್ಲಿ ತಾ.2 ರಂದು ಹೊಸದಾಗಿ 5 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 92,260 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,349 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,215 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು 61 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 15 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , 46 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 58 ನಿಯಂತ್ರಿತ ವಲಯಗಳಿವೆ.