ಗೋಣಿಕೊಪ್ಪ ವರದಿ, ಡಿ. 2: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ತಾ. 3 ರಂದು (ಇಂದು) ಇಲ್ಲಿನ ಅರಣ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕೃಷಿ ಶಿಕ್ಷಣ ದಿನಾಚರಣೆ ಆಯೋಜಿಸಲಾಗಿದೆ.

ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಆರಂಭಗೊಳ್ಳಲಿದ್ದು, ವಿದ್ಯಾರ್ಥಿ ನಿಲಯ ಮತ್ತು ರಾಷ್ಟ್ರೀಯ ಬಿದಿರು ನಿಯೋಗದ ವಿವಿಧ ಸೌಕರ್ಯಗಳನ್ನು ಉದ್ಘಾಟಿಸ ಲಾಗುತ್ತದೆ.

ಕೃಷಿ ಸಚಿವ ಬಿ.ಸಿ ಪಾಟೀಲ್, ಅರಣ್ಯ, ಸಚಿವ ಆನಂದ್‍ಸಿಂಗ್, ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಿವಮೊಗ್ಗ ವಿವಿ ಕುಲಪತಿ ಡಾ. ಎಂ.ಕೆ. ನಾಯಕ್ ಭಾಗವಹಿಸಲಿದ್ದಾರೆ.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಮಡಿಕೇರಿ ಶಾಸಕ, ವೀಣಾ ಅಚ್ಚಯ್ಯ, ಎಸ್.ಎಲ್. ಬೋಜೇಗೌಡ, ಆಯನೂರು ಮಂಜುನಾಥ್, ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರುಗಳು, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಲಿ ದ್ದಾರೆ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಪ್ರಕಟಣೆ ತಿಳಿಸಿದೆ.