ಕೂಡಿಗೆ, ಡಿ. 3: ಸಾಹಿತ್ಯವು ಯಾವುದೇ ಭಾಷೆಯಲ್ಲಿ ಇರಲಿ ಅದಕ್ಕೆ ಮನುಷ್ಯನ ಮನಸ್ಸನ್ನು ಬದಲಾಯಿಸುವ ಸಾಮಥ್ರ್ಯವಿದೆ ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಶಿಕ್ಷಕರ ಪುರಸ್ಕಾರದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದರು.

ಶಿಕ್ಷಕರು ಮೌಲ್ಯಯುತವಾದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಾರೆ. ತ್ಯಾಗ ಮನೋಭಾವ ಶಿಕ್ಷಕರಲ್ಲಿ ಅಡಕವಾಗಿರುತ್ತದೆ ಎಂದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿ ಮಾತನಾಡಿ, ಜಿಲ್ಲಾ ಸಾಹಿತ್ಯ ಪರಿಷತ್ತಿನ ತಂಡ ಜಿಲ್ಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಸಾಹಿತ್ಯದ ಅಭಿರುಚಿಗೆ ಎಲ್ಲಾ ವರ್ಗದವರ ಸಹಕಾರ ಮುಖ್ಯ. ಮುಂದಿನ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ ಮಾತನಾಡಿ, ಜಿಲ್ಲೆಯ ವಿವಿಧ ಕ್ಷೇತ್ರದ ಶಿಕ್ಷಕರನ್ನು ಪುರಸ್ಕಾರ ಮಾಡುತ್ತಿರುವ ಸಾಹಿತ್ಯ ಪರಿಷತ್ತಿನ ಕಾರ್ಯವೈಖರಿಯ ಬಗ್ಗೆ ಶ್ಲಾಘಿಸಿದರು.

ಈ ಸಂದರ್ಭ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಬಾರ ಉಪ ನಿರ್ದೇಶಕ ಮಹಾಲಿಂಗಯ್ಯ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್. ಚೇತನ್ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಮೊದಲಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಮಾಹಿತಿ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ಗೌರವ ಕೋಶಾಧ್ಯಕ್ಷ ಎಸ್.ಎ. ಮುರುಳೀಧರ, ಗೌರವ ಕಾರ್ಯದರ್ಶಿ ಎನ್.ಎ. ಅಶ್ವತ್‍ಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿಲಿಪ್‍ವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್. ಚೇತನ್, ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ಮಧೋಶ್ ಪೂವಯ್ಯ, ಪೆÇನ್ನಂಪೇಟೆ ಕಸಾಪ ಅಧ್ಯಕ್ಷ ಡಾ. ಚಂದ್ರಶೇಖರ, ಸೋಮವಾರಪೇಟೆ ತಾಲೂಕು ಕಸಾಪ ಅಧ್ಯಕ್ಷ ಜವರಪ್ಪ, ಜಿಲ್ಲಾ ಕಸಾಪ ನಿರ್ದೇಶಕರಾದ ಕೆ.ಕೆ. ನಾಗರಾಜ ಶೆಟ್ಟಿ, ಧನಂಜಯ, ಉಷಾ ದಯಾನಂದ, ದಮಯಂತಿ ಸೇರಿದಂತೆ ಸದಸ್ಯರು ಹಾಜರಿದ್ದರು.