ಮಡಿಕೇರಿ, ಡಿ. 3: ಜಿಲ್ಲೆಯಲ್ಲಿ ತಾ.3 ರಂದು ಹೊಸದಾಗಿ 10 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 92,919 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,359 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,231 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು, 55 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 15 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 40 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 59 ನಿಯಂತ್ರಿತ ವಲಯಗಳಿವೆ.