ಗೋಣಿಕೊಪ್ಪಲು, ಡಿ. 4: ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ಪ್ರಗತಿಪರ ಚಿಂತಕರ ಒಕ್ಕೂಟದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ಪ್ರಯುಕ್ತ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ತಿಳಿಸಿದ್ದಾರೆ. ಅಲ್ಲದೆ ತೆರೆಮೆಕಾಡು ಪೈಸಾರಿ ನಿವಾಸಿಗಳ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಐಕ್ಯ ಹೋರಾಟ ಸಮಿತಿ ವತಿಯಿಂದ ವೀರಾಜಪೇಟೆಯ ತಾಲೂಕು ಕಚೇರಿಯ ಮುಂದೆ ತಾ. 5 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.