ಸೋಮವಾರಪೇಟೆ, ಡಿ.4: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ತಾ. 12ರಂದು ಜಿಲ್ಲಾ ಮಟ್ಟದ ವಚನ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ ತಿಳಿಸಿದ್ದಾರೆ.
ತಾ. 12 ರಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಚನ ಗೀತೆಗಳನ್ನು ಹಾಡಲು ಆಸಕ್ತಿ ಇರುವವರು ಮೊ. 9242814868/ 9480995739 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.