ಮಡಿಕೇರಿ, ಡಿ. 4: ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಸಮೀಪ ಅಲಂಕಾರಿಕ ಹಾಗೂ ಗೃಹೋಪಯೋಗಿ ವಸ್ತುಗಳ ಸಂಸ್ಥೆಯಾದ "ಶುಭಂ" ಎಲೆಕ್ಟ್ರಾನಿಕ್ ಶೋ ರೂಂನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹಾಗೂ ಹಿರಿಯರಾದ ಬೇಬಿ ಮಂದಣ್ಣ ಉದ್ಘಾಟಿಸಿದರು.

ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಶುಭ ಹಾರೈಸಿದರು. ಶುಭಂ ಶೋ ರೂಂನ ಪ್ರಧಾನ ವ್ಯವಸ್ಥಾಪಕ ನಂದಕುಮಾರ್ ವೀರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಕೂಡ ಶಾಖೆ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಶುಭಂ ಗ್ರೂಪ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕೊಠಾರಿ ಮೊದಲಾದವರು ಪಾಲ್ಗೊಂಡಿದ್ದರು.