ಗೋಣಿಕೊಪ್ಪಲು, ಡಿ. 5: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನಾಚರಣೆ ಹಾಗೂ ವೀರಾಜಪೇಟೆ ತಾಲೂಕಿನ ಪ್ರತಿಭಾನ್ವಿತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಗೋಣಿಕೊಪ್ಪಲುವಿನ ಕಾಮತ್ ನವಮಿ ಸಭಾಂಗಣದಲ್ಲಿ ತಾ. 6 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ತಾಲೂಕು ಸಂಚಾಲಕ ಹೆಚ್.ಆರ್. ಪಾಪಣ್ಣ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಉಚ್ಚ ನ್ಯಾಯಲಯದ ಹಿರಿಯ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ ಉದ್ಘಾಟಿಸಲಿದ್ದು, ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಎನ್.ಎನ್. ರಾಮರೆಡ್ಡಿ, ಸರ್ವೋದಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹೆಚ್.ಎಲ್. ಗಿರೀಶ್, ಗೋಣಿಕೊಪ್ಪಲುವಿನ ಕಾಮತ್ ಗ್ರೂಪ್‍ನ ಉದ್ಯಮಿಗಳಾದ ಎಂ.ಪಿ. ಕೇಶವ್ ಕಾಮತ್, ಗೋಣಿಕೊಪ್ಪ ಠಾಣಾಧಿಕಾರಿ ಹೆಚ್. ಸುಬ್ಬಯ್ಯ, ‘ಕೊಡಗುಧ್ವನಿ’ ಸಂಪಾದಕ ಹೆಚ್.ಕೆ. ಜಗದೀಶ್, ದಸಂಸ ವಿಭಾಗಿಯ ಸಂಚಾಲಕ ಎನ್. ವೀರಭದ್ರಯ್ಯ, ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ಜಿಲ್ಲಾ ಸಂಘಟನಾ ಸಂಚಾಲಕ ಡಿ.ಜೆ. ಈರಪ್ಪ, ಹೆಚ್.ಎ. ರವಿ, ಮುಖಂಡರಾದ ಹೆಚ್.ಆರ್. ಸತೀಶ್ (ಸಿಂಗಿ) ಮಡಿಕೇರಿ ತಾಲೂಕು ಸಂಚಾಲಕ ಎ.ಪಿ. ದೀಪಕ್, ಕುಮಾರ, ಲೋಕೇಶ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.