ಮಡಿಕೇರಿ, ಡಿ. 4: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಘೋಷಿಸಿರುವುದರಿಂದ, ಯಾವುದೇ ಅವ್ಯವಹಾರಗಳು ನಡೆಯದಂತೆ ಸುಗಮವಾಗಿ ಚುನಾವಣೆ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು ಆಯುಧ ಕಾಯ್ದೆ 1959ರ ಕಲಂ 24ಎ ಮತ್ತು 24ಬಿ ರಡಿಯಲ್ಲಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಲು ಪರವಾನಗಿ ಹೊಂದಿರುವವರು ಶಸ್ತ್ರಾsಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ತಾ. 8 ರ ಸಂಜೆ 5 ಗಂಟೆಯೊಳಗೆ ಠೇವಣಿ ಮಾಡಲು ಹಾಗೂ ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ಒಯ್ಯುವುದನ್ನು ಮತ್ತು ಹಿಡಿದು ಓಡಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
(ಮೊದಲ ಪುಟದಿಂದ) ಈ ಆದೇಶವು ಬ್ಯಾಂಕ್ ಕರ್ತವ್ಯದ ನಿಮಿತ್ತ ಬಂದೂಕು ಹೊಂದಿರುವುದಕ್ಕೆ ಅನ್ವಯಿಸುವುದಿಲ್ಲ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ (ತಾ. 31 ರವರೆಗೆ) ಜಾರಿಯಲ್ಲಿರುತ್ತದೆ. ಆದೇಶದ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188 ರಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.