ಚೆಟ್ಟಳ್ಳಿ, ಡಿ. 4: ಅಟೇಕರ್ಸ್ ಹಾಕತ್ತೂರು ಫುಟ್ಬಾಲ್ ಕ್ಲಬ್ ವತಿಯಿಂದ ಜಿಲ್ಲಾಮಟ್ಟದ 6+2 ಜನರ ಕಾಲ್ಚೆಂಡು ಪಂದ್ಯಾಟ ತಾ. 12 ಮತ್ತು 13 ರಂದು ಹಾಕತ್ತೂರು ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲು ನೋಂದಾಯಿಸಿದ 30 ತಂಡಗಳಿಗೆ ಮಾತ್ರ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತ ತಂಡಗಳು ತಾ. 6 ರೊಳಗೆ ನೋಂದಾಯಿಸಲು ಆಯೋಜಕರು ಮನವಿ ಮಾಡಿದ್ದಾರೆ.
ಕೋವಿಡ್-19 ಮಾರ್ಗಸೂಚಿಯಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪಂದ್ಯಾವಳಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9481770673, 8310148352, ಹಾಗೂ 9481129964 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.