ಮಡಿಕೇರಿ, ಡಿ. 4: ಜಿಲ್ಲೆಯಲ್ಲಿ ತಾ. 4 ರಂದು ಹೊಸದಾಗಿ 17 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 93,306 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,376 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,240 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು 63 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 16 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 47 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 63 ನಿಯಂತ್ರಿತ ವಲಯಗಳಿವೆ.