ಮಡಿಕೇರಿ, ಡಿ. 6: ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ಜಿಲ್ಲಾ ಮಟ್ಟದಲ್ಲಿ ಅಕ್ಕಿ ಗಿರಣಿಗಳ ಹಲ್ಲಿಂಗ್ ಸಾಮಥ್ರ್ಯದ ವಿವರಗಳನ್ನು ಪಡೆದು ನೋಂದಣಿ ಮಾಡುವ ಸಂಬಂಧ ತಾ. 7 ರಂದು (ಇಂದು) ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕರಾದ ಟಿ.ಪಿ. ಹರೀಶ್‍ಕುಮಾರ್ ಅವರು ತಿಳಿಸಿದ್ದಾರೆ.