ಮಡಿಕೇರಿ, ಡಿ. 6: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹತ್ತಿರವಿರುವ ಯುದ್ಧ ಸ್ಮಾರಕದ (ಸನ್ನಿಸೈಡ್) ಆವರಣದಲ್ಲಿ ತಾ. 7 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸರಳವಾಗಿ ನಡೆಯಲಿದೆ ಎಂದು ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ಅವರು ತಿಳಿಸಿದ್ದಾರೆ.