ನಾಪೋಕ್ಲು, ಡಿ. 6: ಕೋಪಟ್ಟಿ ಗ್ರಾಮದ ಶ್ರೀ ಮಹಾವಿಷ್ಣು ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ರೂ. 5 ಲಕ್ಷಗಳ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಡಾ. ಯೋಗೀಶ್ ಸಮಿತಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಸದಾಶಿವಗೌಡ, ಮಹಾವಿಷ್ಣು ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಟಿ. ಶ್ರೀನಿವಾಸ್, ಅರುಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಎಸ್. ರಾಮಕೃಷ್ಣ, ಒಕ್ಕೂಟದ ಅಧ್ಯಕ್ಷ ಪದ್ಮನಾಭ ಮತ್ತು ಶಶಿಕಲಾ, ದೇವಸ್ಥಾನ ಸಮಿತಿಯ ಕಾರ್ಯದರ್ಶಿ ದಿನೇಶ್, ಮೇಲ್ವಿಚಾರಕ ಸಂತೋಷ್, ಸೇವಾ ಪ್ರತಿನಿಧಿಗಳಾದ ಅಣ್ಣಯ್ಯ, ಗೋಪಾಲ್ ಮತ್ತು ಗ್ರಾಮಸ್ಥರು ಇದ್ದರು.