ಸೋಮವಾರಪೇಟೆ,ಡಿ.7: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಾ. 8ರಂದು (ಇಂದು) ಪ.ಪಂ. ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದೆ ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.
ಅಪರಾಹ್ನ 3 ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಟ್ಟಣದ ಮೂಲಕ ಹಾದುಹೋಗುವ ಹೆದ್ದಾರಿ, ಪಟ್ಟಣದಲ್ಲಿ ವಾಹನ ಸಂಚಾರ, ವಾಹನ ನಿಲುಗಡೆ, ವಿದ್ಯುತ್, ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದ್ದು, ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.