ಸೋಮವಾರಪೇಟೆ, ಡಿ.7: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸ್ಪರ್ಧಾಕಾಂಕ್ಷಿಗಳು ದಾಖಲಾತಿಗಳನ್ನು ಹೊಂದಿಸಲು ಓಡಾಟ ನಡೆಸುತ್ತಿದ್ದಾರೆ.ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಅವಕಾಶ ಒದಗಿಸಿದ್ದು, ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳನ್ನು ಹೊಂದಿ ಸಲು ನೋಟರಿ ಕಚೇರಿ, ತಾಲೂಕು ಕಚೇರಿಗೆ ಓಡಾಟ ನಡೆಸುತ್ತಿದ್ದಾರೆ.226 ಮತಗಟ್ಟೆಗಳು: ಸೋಮವಾರಪೇಟೆ ತಾಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು ಸೋಮವಾರಪೇಟೆ, ಡಿ.7: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸ್ಪರ್ಧಾಕಾಂಕ್ಷಿಗಳು ದಾಖಲಾತಿಗಳನ್ನು ಹೊಂದಿಸಲು ಓಡಾಟ ನಡೆಸುತ್ತಿದ್ದಾರೆ.ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಅವಕಾಶ ಒದಗಿಸಿದ್ದು, ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳನ್ನು ಹೊಂದಿ ಸಲು ನೋಟರಿ ಕಚೇರಿ, ತಾಲೂಕು ಕಚೇರಿಗೆ ಓಡಾಟ ನಡೆಸುತ್ತಿದ್ದಾರೆ.
226 ಮತಗಟ್ಟೆಗಳು: ಸೋಮವಾರಪೇಟೆ ತಾಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು ಸೂಕ್ಷ್ಮ ಹಾಗೂ 148 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ತಾಲೂಕಿನಲ್ಲಿ 73,879 ಮಂದಿ ಪುರುಷರು, 75,990 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 1,49,869 ಮಂದಿ ಮತದಾರರಿದ್ದು, ಸೋಮವಾರಪೇಟೆ ತಾಲೂಕಿಗೆ ಚುನಾವಣಾ ನೋಡಲ್ ಅಧಿಕಾರಿಯಾಗಿ ಉಪ ವಿಭಾಗಾಧಿಕಾರಿ
(ಮೊದಲ ಪುಟದಿಂದ) ಈಶ್ವರ್ಕುಮಾರ್ ಅವರನ್ನು ನಿಯೋಜಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. 40 ಪಂಚಾಯಿತಿಗಳಿಗೆ ತಲಾ ಒಬ್ಬರಂತೆ ರಿಟರ್ನಿಂಗ್ ಅಧಿಕಾರಿಯನ್ನು ನೇಮಿಸಲಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ತಾಲೂಕು ಮಟ್ಟದ 3 ಅಧಿಕಾರಿಗಳನ್ನು ಚುನಾವಣಾಧಿಕಾರಿ ಹಾಗೂ ಸಹಾಯ ಚುನಾವಣಾಧಿಕಾರಿಗಳಾಗಿ ನಿಯೋಜಿಸಲಾಗಿದೆ.
ನಾಮಪತ್ರ ಸಲ್ಲಿಕೆಗೆ ತಾ. 11 ಕೊನೆ ದಿನವಾಗಿದ್ದು, ಪ್ರತಿ ದಿನ ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. 12 ರಂದು ಪರಿಶೀಲನೆ, 14 ರಂದು ವಾಪಸ್ ಪಡೆಯಲು ಕೊನೆಯ ದಿನ, 22ರಂದು ಚುನಾವಣೆ ನಡೆದು 30ಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ತಾಲೂಕು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.
ಮಸ್ಟರಿಂಗ್ ಕೇಂದ್ರ ಬದಲು: ಈವರೆಗೆ ಸೋಮವಾರಪೇಟೆಯ ಜೂನಿಯರ್ ಕಾಲೇಜಿನಲ್ಲಿ ಚುನಾವಣೆಯ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ನಡೆಯುತ್ತಿದ್ದುದು ಈ ಬಾರಿ ಕುಶಾಲನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ರಾಜಕೀಯ ಪಕ್ಷಗಳ ಚಿಹ್ನೆ ರಹಿತವಾಗಿ ಗ್ರಾಮ ಪಂಚಾಯಿತಿ ಚುನಾವಣೆ ನಡೆದರೂ ಸಹ, ರಾಜಕೀಯ ಪಕ್ಷಗಳ ಬೆಂಬಲಿಗರು ಚುನಾವಣೆಯಲ್ಲಿ ಧುಮುಕುತ್ತಿರುವದರಿಂದ ಎಲ್ಲೆಡೆ ರಾಜಕೀಯ ಕಂಡುಬರುತ್ತಿದೆ.
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ತಮ್ಮ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗುರುತಿಸಿ ಚುನಾವಣಾ ಅಖಾಡಕ್ಕೆ ತಳ್ಳಿದ್ದು, ಗ್ರಾ.ಪಂ., ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ.
ಈ ಬಾರಿ ಯುವ ಸಮೂಹ ಚುನಾವಣೆಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ದಾಖಲಾತಿಗಳನ್ನು ಹೊಂದಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಇನ್ನು ಪಕ್ಷದಿಂದ ಬೆಂಬಲ ದೊರಕದ ಮಂದಿ, ಪಕ್ಷಕ್ಕೆ ಸೆಡ್ಡು ಹೊಡೆದು ತಮ್ಮ ಬೆಂಬಲಿಗರೊಂದಿಗೆ ಚುನಾವಣಾ ಅಖಾಡಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.
ಒಟ್ಟಾರೆ ತಾಲೂಕು ಕಚೇರಿ ಚುನಾವಣಾ ಚಟುವಟಿಕೆಗಳ ಕೇಂದ್ರವಾಗಿದ್ದು, ಬಹುತೇಕ ಎಲ್ಲಾ ಸಿಬ್ಬಂದಿಗಳೂ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಮುಖವಾಗಿ ಮೀಸಲಾತಿ ಕ್ಷೇತ್ರಗಳಿಗೆ ಅಗತ್ಯವಾಗಿರುವ ಜಾತಿ ಮತ್ತು ಆದಾಯ ದೃಡೀಕರಣ ಪತ್ರಕ್ಕಾಗಿ ಸ್ಪರ್ಧಾಕಾಂಕ್ಷಿಗಳು ತಾಲೂಕು ಕಚೇರಿಯಲ್ಲಿ ಓಡಾಟ ನಡೆಸುತ್ತಿದ್ದಾರೆ.
ನಾಮಪತ್ರ ಸಲ್ಲಿಕೆ
ಸೋಮವಾರಪೇಟೆ ತಾಲೂಕಿನಲ್ಲಿ ಇಂದು ಒಟ್ಟು 17 ನಾಮಪತ್ರಗಳು ಸಲ್ಲಿಕೆಯಾಗಿವೆ. ಬ್ಯಾಡಗೊಟ್ಟ, ಬೆಸೂರು, ದುಂಡಳ್ಳಿ, ಕಿರಗಂದೂರು, ಹೆಬ್ಬಾಲೆ ಗ್ರಾ.ಪಂ.ಗಳಿಗೆ ತಲಾ ಒಂದು, ಹಂಡ್ಲಿ ಗ್ರಾ.ಪಂ.ನಲ್ಲಿ 4, ಶನಿವಾರಸಂತೆಯಲ್ಲಿ 2, ಕೂಡಿಗೆಯಲ್ಲಿ 3, ಶಿರಂಗಾಲದಲ್ಲಿ 3 ನಾಮಪತ್ರಗಳು ಸಲ್ಲಿಕೆಯಾಗಿವೆ.
- ವಿಜಯ್ ಹಾನಗಲ್