ಮಡಿಕೇರಿ, ಡಿ. 7: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಜಿಲ್ಲಾ ಜಾತ್ಯತೀತ ಜನತಾದಳದಿಂದ ಚುನಾವಣಾ ಪೂರ್ವ ಸಿದ್ಧತಾ ಸಭೆ ನಡೆಸಿತು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಕೆ. ಎಂ. ಗಣೇಶ್, ಗ್ರಾ.ಪಂ ಚುನಾವಣೆ ಪಕ್ಷದ ಗೆಲುವಿಗೆ ಮುಖ್ಯ ಘಟ್ಟವಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಕಾರ್ಯ ನಿರ್ವಹಿಸಬೇಕು ಎಂದರು. ಜೀವಿಜಯ ಅವರು ಜೆಡಿಎಸ್ ಪಕ್ಷ ತೊರೆಯುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ ಜೆಡಿಎಸ್ ಪಕ್ಷದ ಮುಖಂಡರಾದ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರಂತಹ ನಾಯಕರು ಪಕ್ಷದಲ್ಲಿರು ವಾಗ ಯಾವ ಭಯವೂ ಇಲ್ಲ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸದೃಢಗೊಳಿಸಲಾಗುವುದು ಎಂದರು.
ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್ ಮಾತನಾಡಿ, ತಳಮಟ್ಟ ದಿಂದಲೇ ಯುವ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಮೂಲಕ ಪಕ್ಷ ಕಟ್ಟಬೇಕೆಂದು ಕರೆ ನೀಡಿದರು. ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಹೆಚ್.ಆರ್.ಸುರೇಶ್ ಮಾತನಾಡಿ, ಜೀವಿಜಯ ಅವರು ಜೆಡಿಎಸ್ ತೊರೆದರೆ ಯಾವುದೇ ನಷ್ಟವಿಲ್ಲ ವೆಂದರು. ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರಿಗೆ ಒತ್ತು ನೀಡ ಬೇಕೆಂದು ತಿಳಿಸಿದರು.
ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರಂತಹ ನಾಯಕರು ಪಕ್ಷದಲ್ಲಿರು ವಾಗ ಯಾವ ಭಯವೂ ಇಲ್ಲ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸದೃಢಗೊಳಿಸಲಾಗುವುದು ಎಂದರು.
ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್ ಮಾತನಾಡಿ, ತಳಮಟ್ಟ ದಿಂದಲೇ ಯುವ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಮೂಲಕ ಪಕ್ಷ ಕಟ್ಟಬೇಕೆಂದು ಕರೆ ನೀಡಿದರು. ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಹೆಚ್.ಆರ್.ಸುರೇಶ್ ಮಾತನಾಡಿ, ಜೀವಿಜಯ ಅವರು ಜೆಡಿಎಸ್ ತೊರೆದರೆ ಯಾವುದೇ ನಷ್ಟವಿಲ್ಲ ವೆಂದರು. ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರಿಗೆ ಒತ್ತು ನೀಡ ಬೇಕೆಂದು ತಿಳಿಸಿದರು.
ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಮನೋಜ್ ಬೋಪಯ್ಯ, ಎಂ.ಎಂ. ಷರೀಫ್, ಯೂಸುಫ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಮಡಿಕೇರಿ ತಾಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಮಹಿಳಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷೆ ಎಂ. ಎ. ರುಬೀನಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಾಷಾ, ಕಾರ್ಯದರ್ಶಿ ಎನ್. ಸಿ. ಸುನಿಲ್, ಖಜಾಂಚಿ ಡೆನ್ನಿ ಬರೋಸ್, ನಗರ ಅಧ್ಯಕ್ಷ ಖಲೀಲ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ನಾಗರಾಜ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಮಂಜುನಾಥ್ ಮತ್ತಿತರರು ಇದ್ದರು.
ಬಸ್ ಸಂಚಾರಕ್ಕೆ ಒತ್ತಾಯ
ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳಲು ಬಸ್ ಸೌಲಭ್ಯ ಇಲ್ಲದೇ ಇರುವುದರಿಂದ ಭಕ್ತರಿಗೆ ಹಾಗೂ ಈ ಮಾರ್ಗದ ಗ್ರಾಮಸ್ಥರಿಗೆ ತೊಂದರೆಯಾಗಿದ್ದು, ತಕ್ಷಣ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ. ಎಂ. ಗಣೇಶ್ ಒತ್ತಾಯಿಸಿದ್ದಾರೆ.