ಮಡಿಕೇರಿ, ಡಿ. 7: ನಾಯಕರಾದ ವರು ಇತರರನ್ನು ನಾಯಕರನ್ನಾಗಿ ರೂಪಿಸುವ ಮನೋಭಾವ ಹೊಂದಿರ ಬೇಕು ಎಂದು ಕಾಂಗ್ರೆಸ್ ಮುಖಂಡ ಕೆಪಿಸಿಸಿ ವಕ್ತಾರ ಹೆಚ್.ಎಸ್. ಚಂದ್ರಮೌಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಅಧ್ಯಕ್ಷತೆಯಲ್ಲಿ ಮೂರ್ನಾಡುವಿನಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಗೆ ಉಸ್ತುವಾರಿ ನೇಮಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತ್‍ನಲ್ಲಿ ಸಮರ್ಥ, ಪ್ರಾಮಾಣಿಕ ವ್ಯಕ್ತಿ ಸದಸ್ಯನಾದರೆ ಮಾತ್ರ ಪಾರದರ್ಶಕ ಆಡಳಿತ ನಿರೀಕ್ಷಿಸಲು ಸಾಧ್ಯ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಜನರ ವಿಶ್ವಾಸವನ್ನು ಗಳಿಸಿದವರಿಗೆ ಆದ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು. ಕೆಪಿಸಿಸಿ ಮುಖಂಡ ಟಿ.ಪಿ. ರಮೇಶ್ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿ ನಿಂದ ಕೆಲಸ ಮಾಡಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸ ಬೇಕೆಂದು ಮನವಿ ಮಾಡಿದರು. ಅಪ್ರುರವೀಂದ್ರ ಹಾಗೂ ಸ್ಥಳೀಯ ಮುಖಂಡರ ಮಾರ್ಗದರ್ಶನದಲ್ಲಿ ಉಸ್ತುವಾರಿ ಸಮಿತಿ ರಚಿಸಲಾಯಿತು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಮುಖಂಡರಾದ ಮುಂಡಂಡ ಬಾಗೇಶ್, ಎಂ.ಎ. ಮಹಮ್ಮದ್ ಅಲಿ, ಮೀನಾಕ್ಷಿ ಕೇಶವ, ಶಿವಕುಮಾರ್ ಎ.ಆರ್., ನಂದಕುಮಾರ್, ಸೇರಿದಂತೆ ವಲಯ ಕಾಂಗ್ರೆಸ್ ಮತ್ತು ಬೂತ್ ಕಾಂಗ್ರೆಸ್ ಪ್ರಮುಖರು ಭಾಗವಹಿಸಿದ್ದರು. ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಮಾದಾಪುರ

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾದಾಪುರ ವಲಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಂಚಾಯತ್ ಹಾಗೂ ಬೂತ್ ಮಟ್ಟದ ಚುನಾವಣಾ ಉಸ್ತುವಾರಿ ಸಮಿತಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ನೇತೃತ್ವದಲ್ಲಿ ರಚಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದಾ ಧರ್ಮಪ್ಪ, ಮಾಜಿ ಜಿ.ಪಂ. ಸದಸ್ಯ ವಿ.ಪಿ. ಶಶಿಧರ್, ಹಿರಿಯ ಮುಖಂಡ ಮನು ಮೇದಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ದಾದ ಬೋಪಯ್ಯ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.