ವೀರಾಜಪೇಟೆ, ಡಿ. 7: ವೀರಾಜಪೇಟೆ ತಾಲೂಕು ಸರ್ಕಾರಿ ನೌಕರರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತಿ ಹೆಚ್ಚ್ಚು ಅಂಕ ಪಡೆದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್. ಗುರುರಾಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ವಿತರಿಸುವ ಪ್ರತಿಭಾ ಪುರಸ್ಕಾರವನ್ನು ಪ್ರಕೃತಿ ವಿಕೋಪ ಹಾಗೂ ಕೋವಿಡ್‍ನಿಂದಾಗಿ ವಿತರಿಸಲು ಸಾಧ್ಯವಾಗಿಲ್ಲ. ಅರ್ಜಿಯೊಂದಿಗೆ ವಿದ್ಯಾರ್ಥಿಗಳ ತಂದೆ/ ತಾಯಿ ರಾಜ್ಯ ಸರ್ಕಾರದ ಇಲಾಖೆಯಲ್ಲಿ ಖಾಯಂ ನೌಕರರಾಗಿರುವ ಗುರುತಿನ ಚೀಟಿ, ಅಥವಾ ಸೇವಾ ದೃಡೀಕರಣ ಪ್ರಮಾಣ ಪತ್ರ (ರಾಜ್ಯ ಸರ್ಕಾರದ ನಿಗಮ ಮಂಡಳಿ, ವಿಶ್ವವಿದ್ಯಾಲಯ, ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ), ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ದೂರವಾಣಿ ಸಂಖ್ಯೆ ಇವುಗಳನ್ನು ನೀಡಬೇಕು. ತಾ.31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಬಿ.ಟಿ ದೇವರಾಜ್ 9739570806, ಖಜಾಂಜಿ ಲಲಿತಾ 9449760816 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.