ಮಡಿಕೇರಿ, ಡಿ. 7: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಸಹಯೋಗದಲ್ಲಿ ತಾ. 19 ರಂದು ಐನ್‍ಮನೆ-ಪಂಡ್, ಇಂದ್, ಮಿಂಞಕ್ ಈ ವಿಷಯಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಲಿದೆ.

ಆಸಕ್ತಿ ಇರುವವರು ಈ ವಿಷಯದ ಕುರಿತು ಪ್ರಬಂಧ ಬರೆದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಗೆ ಅಂಚೆ ಅಥವಾ ಇ-ಮೇಲ್ ಮೂಲಕ ತಾ. 18 ರೊಳಗೆ ಕಳುಹಿಸಿಕೊಡಬೇಕು. ಕನ್ನಡ, ಕೊಡವ ಹಾಗೂ ಆಂಗ್ಲ ಭಾಷೆಯಲ್ಲಿ ಸಾರಾಂಶ ಸಲ್ಲಿಸ ಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.