ಸೋಮವಾರಪೇಟೆ, ಡಿ.7: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯನ್ನು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಆಚರಿಸಲಾಯಿತು.ಇಲ್ಲಿನ ಅಂಬೇಡ್ಕರ್ ಪ್ರತಿಮೆಯ ಬಳಿ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಕಾರ್ಯಕ್ರಮ ನಡೆಯಿತು. ಪಕ್ಷದ ಮುಖಂಡರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ತಾಲೂಕು ಅಧ್ಯಕ್ಷ ರಾಮಕೃಷ್ಣ, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯರಾದ ಬಿ.ಆರ್. ಮಹೇಶ್, ಬಿಜೆಪಿ ನಗರಾಧ್ಯಕ್ಷ ಸೋಮೇಶ್, ಪ್ರಮುಖರಾದ ರವಿಚಂದ್ರ, ಶೋಭಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಡ್ಲಿಪೇಟೆಯಲ್ಲಿ: ಕೊಡ್ಲಿಪೇಟೆ ವ್ಯಾಪ್ತಿಯ ದಲಿತ ಸಂಘಟನೆಗಳ ವತಿಯಿಂದ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ನಡೆಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಈ ಸಂದರ್ಭ ದಲಿತ ಸಂಘಟನೆಗಳ ಮುಖಂಡರಾದ ಜೆ.ಎಲ್. ಜನಾರ್ಧನ್, ಡಿ.ಸಿ. ಸೋಮಣ್ಣ, ವಿಜಯ್, ವಸಂತ್, ವೀರಭದ್ರ, ಕಾಳಯ್ಯ ಮಾಸ್ಟರ್, ಪ್ರಸನ್ನ, ಇಂದ್ರೇಶ್, ನವೀನ್, ನಾಗೇಶ್, ಹೇಮಂತ್, ಪೃಥ್ವಿ ಸೇರಿದಂತೆ ಇತರರು ಹಾಜರಿದ್ದರು.