ಸೋಮವಾರಪೇಟೆ, ಡಿ.7: ಮಾಜೀ ಸಚಿವ, ಜೆಡಿಎಸ್ ಮುಖಂಡರಾಗಿದ್ದ ಬಿ.ಎ. ಜೀವಿಜಯ ಅವರು ನಿನ್ನೆ ನಡೆದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವ ಮೂಲಕ ತಾವು ಕಾಂಗ್ರೆಸ್ ಸೇರಿರುವದನ್ನು ಅಧಿಕೃತಗೊಳಿಸಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆ ನಂತರ ಜಿಲ್ಲಾ ಜೆಡಿಎಸ್ ಮುಖಂಡರೊಂದಿಗೆ ಮನಸ್ತಾಪ ಬೆಳೆಸಿಕೊಂಡು, ವರಿಷ್ಠರಿಂದಲೂ ಅಂತರ ಕಾಯ್ದುಕೊಂಡಿದ್ದ ಜೀವಿಜಯ ಅವರು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು.
ಇದೀಗ ಊಹಾಪೋಹಗಳಿಗೆ ತೆರೆಬಿದ್ದಿದ್ದು, ತಾ. 9ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವದು ದೃಢವಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನವೇ ಜೀವಿಜಯ ಅವರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿ ಸುವ ಮೂಲಕ ಜೆಡಿಎಸ್ ತೊರೆದಿರು ವದನ್ನು ಅಧಿಕೃತಗೊಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಜೀವಿಜಯ ಅವರ ಪಕ್ಷ ಸೇರ್ಪಡೆ ಕಾಂಗ್ರೆಸ್ ಬಲವನ್ನು ಹೆಚ್ಚಿಸಿದೆ. ಅತ್ಯಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದ್ದು, ಮುಂಬರುವ ತಾ.ಪಂ., ಜಿ.ಪಂ., ವಿಧಾನ ಸಭೆ, ಲೋಕಸಭಾ ಚುನಾವಣೆ ಗಳಲ್ಲೂ ಪಕ್ಷ ಸೋಮವಾರಪೇಟೆ, ಡಿ.7: ಮಾಜೀ ಸಚಿವ, ಜೆಡಿಎಸ್ ಮುಖಂಡರಾಗಿದ್ದ ಬಿ.ಎ. ಜೀವಿಜಯ ಅವರು ನಿನ್ನೆ ನಡೆದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವ ಮೂಲಕ ತಾವು ಕಾಂಗ್ರೆಸ್ ಸೇರಿರುವದನ್ನು ಅಧಿಕೃತಗೊಳಿಸಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆ ನಂತರ ಜಿಲ್ಲಾ ಜೆಡಿಎಸ್ ಮುಖಂಡರೊಂದಿಗೆ ಮನಸ್ತಾಪ ಬೆಳೆಸಿಕೊಂಡು, ವರಿಷ್ಠರಿಂದಲೂ ಅಂತರ ಕಾಯ್ದುಕೊಂಡಿದ್ದ ಜೀವಿಜಯ ಅವರು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು.
ಇದೀಗ ಊಹಾಪೋಹಗಳಿಗೆ ತೆರೆಬಿದ್ದಿದ್ದು, ತಾ. 9ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವದು ದೃಢವಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನವೇ ಜೀವಿಜಯ ಅವರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿ ಸುವ ಮೂಲಕ ಜೆಡಿಎಸ್ ತೊರೆದಿರು ವದನ್ನು ಅಧಿಕೃತಗೊಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಜೀವಿಜಯ ಅವರ ಪಕ್ಷ ಸೇರ್ಪಡೆ ಕಾಂಗ್ರೆಸ್ ಬಲವನ್ನು ಹೆಚ್ಚಿಸಿದೆ. ಅತ್ಯಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದ್ದು, ಮುಂಬರುವ ತಾ.ಪಂ., ಜಿ.ಪಂ., ವಿಧಾನ ಸಭೆ, ಲೋಕಸಭಾ ಚುನಾವಣೆ ಗಳಲ್ಲೂ ಪಕ್ಷ ಸಚಿವರಾದ ಬಿ.ಎ.ಜೀವಿಜಯ ಅವರು ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಯನ್ನೇ ಸೋಲಿಸಿ ಹೆಸರು ಮಾಡಿದ್ದರು. ಅವರ ರಾಜಕೀಯ ವರ್ಚಸ್ಸು ಕಾಂಗ್ರೆಸ್‍ಗೆ ಹೆಚ್ಚಿನ ಶಕ್ತಿ ತುಂಬಲಿದೆ ಎಂದರು.
ಕಳೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಪೈಕಿ 17 ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು. ಈ ಬಾರಿ ಅತೀ ಹೆಚ್ಚು ಪಂಚಾಯಿತಿ ಆಡಳಿತವನ್ನು ಹಿಡಿಯುವ ಗುರಿಯೊಂದಿಗೆ ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಜೀವಿಜಯ ಅವರು ಜೆಡಿಎಸ್‍ನಲ್ಲಿದ್ದ ಸಂದರ್ಭ ಜಾತ್ಯತೀತ ಮತಗಳು ಹಂಚಿ ಹೋಗಿ ಬಿಜೆಪಿ ಗೆಲುವು ಸಾಧಿಸುತ್ತಿತ್ತು. ಜೆಡಿಎಸ್-ಕಾಂಗ್ರೆಸ್ ಒಡಕಿನಿಂದಾಗಿ ಕಳೆದ 15 ವರ್ಷಗಳಿಂದಲೂ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿ ರಲಿಲ್ಲ. ಇದೀಗ ಜೀವಿಜಯ ಅವರ ಸೇರ್ಪಡೆಯಿಂದ ಸ್ಥಳೀಯ ಚುನಾವಣೆಯೊಂದಿಗೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾ. 9ರಂದು ಜೀವಿಜಯ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದು, ನಂತರದ ದಿನಗಳಲ್ಲಿ ಅವರ ಬೆಂಬಲಿಗ ನಾಯಕರು, ಕಾರ್ಯಕರ್ತರೂ ಸಹ ಕಾಂಗ್ರೆಸ್‍ಗೆ ಸೇರಲಿದ್ದಾರೆ. ಆ ಮೂಲಕ ಕೊಡಗನ್ನು ಮತ್ತೊಮ್ಮೆ ಕಾಂಗ್ರೆಸ್‍ನ ಭದ್ರಕೋಟೆ ಮಾಡಲಿದ್ದೇವೆ ಎಂದರು.
ಗೋಷ್ಠಿಯಲ್ಲಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ಬಿ.ಜೆ.ಪಿ.ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕರ, ಬಡವರ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದು, ದೇಶ ಆರ್ಥಿಕತೆ ಸಂಕಷ್ಟದಲ್ಲಿದೆ. ಈ ಕಾರಣದಿಂದ ಬಿ.ಜೆ.ಪಿ ವಿರುದ್ಧ ಹೋರಾಟ ಮಾಡಲು ಜೀವಿಜಯ ಅವರು ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ವಾಪಾಸ್ಸಾಗಿದ್ದಾರೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸಜ್ಜುಗೊಂಡಿದ್ದು, ಕಾಂಗ್ರೆಸ್ ಸಭೆಗಳಿಗೆ ಜೆಡಿಎಸ್‍ನ ಕಾರ್ಯಕರ್ತರೂ ಆಗಮಿಸುತ್ತಿದ್ದಾರೆ. ಅಬ್ಬೂರುಕಟ್ಟೆ, ಐಗೂರು, ಕಿರಗಂದೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎ. ಯಾಕೂಬ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಪಂಚಾಯತ್ ರಾಜ್ಯ ವ್ಯವಸ್ಥೆ ಗ್ರಾಮೀಣಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಎಸ್.ಸಿ.ಘಟಕದ ರಾಜ್ಯ ಸಂಚಾಲಕ ಬಿ.ಈ. ಜಯೇಂದ್ರ ಇದ್ದರು, ಯುವ ಕಾಂಗ್ರೆಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ವಿ. ಮಿಥುನ್ ಉಪಸ್ಥಿತರಿದ್ದರು.