ಪೆÇನ್ನಂಪೇಟೆ, ಡಿ. 7: ಹುದಿಕೇರಿಯ ಜನತಾ ಪ್ರೌಢಶಾಲೆಗೆ ಶೀಘ್ರದಲ್ಲೇ ಕಾಯಕಲ್ಪ ದೊರೆಯಲಿದೆ. ತಮ್ಮ ಊರಿನ ಪುರಾತನ ಶಾಲೆಯನ್ನು ಅತ್ಯಾಧುನಿಕ ರೀತಿಯಲ್ಲಿ ಪುನಶ್ಚೇತನಗೊಳಿಸುವ ಮಹತ್ತರವಾದ ಯೋಜನೆಯೊಂದನ್ನು ಕೈಗೆತ್ತಿಕೊಳ್ಳಲು ಹಿರಿಯ ವಕೀಲ ಅಜ್ಜಿಕುಟ್ಟಿರ ಎಸ್. ಪೆÇನ್ನಣ್ಣ ಅವರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೆÇನ್ನಣ್ಣ ಅವರು ಸ್ಥಳೀಯ ಪ್ರಮುಖರೊಂದಿಗೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಎ.ಕೆ. ಸುಬ್ಬಯ್ಯ - ಪೆÇನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್’ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ‘ಸೆಕು ಮ್ಯಾಕ್ಸ್’ ಮತ್ತು ‘ಸ್ಪೇಸ್ ಮ್ಯಾನೇಜ್ಮೆಂಟ್ ಸಿಸ್ಟಮ್’ ಎಂಬ ಸಂಸ್ಥೆಯ ಸಹಭಾಗಿತ್ವದಲ್ಲಿ ಹುದಿಕೇರಿಯ ಜನತಾ ಪ್ರೌಢಶಾಲೆ ಯನ್ನು ಆಧುನೀಕರಣಗೊಳಿಸುವ ಮೂಲಕ ಹೊಸ ಕಾಯಕಲ್ಪ ನೀಡಲು ಪೆÇನ್ನಣ್ಣ ಅವರು ಯೋಜನೆ ರೂಪಿಸಿದ್ದು, ಈಗಾಗಲೇ ಅದಕ್ಕೆ ಅಗತ್ಯವಿರುವ ಪ್ರಕ್ರಿಯೆಗಳು ಆರಂಭಗೊಂಡಿದೆ.
ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭ ಕಾಂಗ್ರೆಸ್‍ನ ಹಿರಿಯ ಮುಖಂಡರುಗಳು ಸೇರಿದಂತೆ ಆಡಳಿತ ಮಂಡಳಿಯ ಕೆಲ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಬೋಧಕ ವೃಂದ ಹಾಜರಿದ್ದರು.