ಶನಿವಾರಸಂತೆ, ಡಿ. 8: ಕೊಡ್ಲಿಪೇಟೆ ಹೊಸಮುನಿಸಿಪಾಲಿಟಿಯ ಕಾಫಿ ಕಣದಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರು ಮಾಡಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಅನ್ವಯ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸಂದೀಪ್‍ನನ್ನು ಬಂಧಿಸಿ ಕಳ್ಳಬಟ್ಟಿ ಸಾರಾಯಿ ಹಾಗೂ ಕಾಫಿ ಕಣದ ಬೇಲಿಯ ಪಕ್ಕ ಬಿಂದಿಗೆಗಳಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಸಲು ಇಟ್ಟಿದ್ದ ಬೆಲ್ಲದ ಕೊಳೆಯನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಇ. ದೇವರಾಜ್ ವಿಧಿ 32 34 ಕೆಇ ಆಕ್ಟ್ ರೀತ್ಯ ಪ್ರಕರಣ ದಾಖಲಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಡಿಂಪಲ್, ಹರೀಶ್, ಪ್ರದೀಪ್ ಹಾಗೂ ರವಿಚಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.