ಮಡಿಕೇರಿ, ಡಿ. 8: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮರಗೋಡು ಹೊಸ್ಕೇರಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಚುನಾವಣಾ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪ್ರು ರವೀಂದ್ರ ಹೆಚ್ಚಿನ ಪ್ರಮಾಣದಲ್ಲಿ ಆಕಾಂಕ್ಷಿಗಳು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಹಿರಿತನ ಹಾಗೂ ಗೆಲ್ಲುವ ಸಾಮಥ್ರ್ಯ ಇರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಾಪು ಸಣ್ಣಯ್ಯ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಮತ್ತು ಸದಾ ಡೆನ್ನಿಸ್ ಚುನಾವಣೆ ಎದುರಿಸಲು ಕೈಗೊಂಡ ಸಿದ್ಧತೆಗಳ ಬಗ್ಗೆ ವಿವರಿಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ನಾಮಪತ್ರ ಸಲ್ಲಿಕೆ, ಘೋಷಣಾ ಪ್ರಮಾಣ ಪತ್ರ, ಚುನಾವಣಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಕಾಂಗ್ರೆಸ್ ಬ್ಲಾಕ್ ಮಾಜಿ ಅಧ್ಯಕ್ಷೆ ಮಂಜುಳಾ, ಎ.ಆರ್. ಪೂವಮ್ಮ, ತೊಂಡಿಯಂಡ ಕುಶಾಲಪ್ಪ, ಪಿ.ಕೆ. ಯೂಸುಫ್ ಆಲಿ, ಪಾಂಡನ ಪುಷ್ಪವೇಣಿ, ಎಸ್.ಜಿ. ಮಧು, ಆನಂದ, ಜಯಣ್ಣ, ಭಾರ್ಗವ್, ಶಿವಣ್ಣ ಹೆಚ್.ಎ., ಚಂದ್ರ, ತಿಮ್ಮಯ್ಯ, ಬೋಸ್ ಸೇರಿದಂತೆ ಪ್ರಮುಖರು ಭಾಗವಹಿಸಿ ಸಲಹೆಗಳನ್ನು ನೀಡಿದರು.