ಮಡಿಕೇರಿ, ಡಿ. 8: ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪಡೆದ ಸಂಘದ ಮಾಜಿ ಅಧ್ಯಕ್ಷ ಮಚ್ಚಮಾಡ ಕಂದಾ ಭೀಮಯ್ಯ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಂಘದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.